ಘತ್ತರಗಿಯಲ್ಲಿ ಸರ್ವೋದಯ ಪಿ ಯು ಕಾಲೇಜ್ ವತಿಯಿಂದ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ.

ಅಫಜಲಪೂರ: ತಾಲೂಕಿನ ಘತ್ತರಗಿ ಗ್ರಾಮದ ಶ್ರೀ ಭಾಗ್ಯವಂತಿ ದೇವಸ್ಥಾನದಲ್ಲಿ ಸರ್ವೋದಯ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯ, ಅಫಜಲಪೂರ ಹಾಗೂ ಕಲಬುರಗಿ ವಿಶ್ವವಿದ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ 2025–26ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವಾರ್ಷಿಕ ವಿಶೇಷ ಶಿಬಿರವನ್ನು ಆಯೋಜಿಸಲಾಯಿತು.

“ನನ್ನ ಭಾರತಕ್ಕಾಗಿ ಯುವಕರು” ಹಾಗೂ “ಡಿಜಿಟಲ್ ಸಾಕ್ಷರತೆಗಾಗಿ ಯುವಕರು” ಎಂಬ ವಿಷಯಾಧಾರಿತ ಕಾರ್ಯಕ್ರಮಗಳು ಶಿಬಿರದಲ್ಲಿ ನಡೆಯುತ್ತಿದ್ದು, ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಹೊಣೆಗಾರಿಕೆ ಮತ್ತು ತಂತ್ರಜ್ಞಾನ ಅರಿವು ಹೆಚ್ಚಿಸುವುದು ಮುಖ್ಯ ಉದ್ದೇಶವಾಗಿದೆ.

ಶಿಬಿರದಲ್ಲಿ ಸುಮಾರು 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ, ದೇವಸ್ಥಾನದ ಆವರಣ ಹಾಗೂ ಉದ್ಯಾನವನದ ಸ್ವಚ್ಛತಾ ಕಾರ್ಯಗಳನ್ನು ಕೈಗೊಂಡರು. ಜೊತೆಗೆ ವಿವಿಧ ಸಮಾಜಮುಖಿ ಚಟುವಟಿಕೆಗಳ ಮೂಲಕ ಗ್ರಾಮದಲ್ಲಿ ಜಾಗೃತಿ ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ಪಿರಸಾಬ ಕಲಾಲ, ಶಶಿಕಾಂತ ಎಂ. ಪತ್ತಾರ, ಸೈಯ್ಯದ ಭಾಷ ಹಚ್ಯಾಳ, ಕು. ಅನಿತಾ ಪಟೇಲ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದು, ಶಿಬಿರದ ಯಶಸ್ಸಿಗೆ ಶುಭಾಶಯ ಕೋರಿದರು.

Share This Article
Leave a Comment