ಮಮತಾ ರಾಹುಲ್ ಗಾಂಧಿ ಮಾತು ಕೇಳಲಿಲ್ಲ ಹಾಗಾಗಿಯೇ ಸೋಲಾಯಿತು : ಸಂಜಯ ರಾವತ.

 

ನವದೆಹಲಿ, ಮೇ 5: ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಸೋಲಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಎಚ್ಚರಿಕೆಯನ್ನು ಲೆಕ್ಕಿಸದಿರುವುದೇ ಕಾರಣ ಎಂದು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ ಹೇಳಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಚುನಾವಣೆಯ ವೇಳೆ ಬಿಜೆಪಿ ಮತ ಕಳವು ನಡೆಸುವ ಬಗ್ಗೆ ರಾಹುಲ್ ಗಾಂಧಿ ಮುಂಚಿತವಾಗಿಯೇ ಎಚ್ಚರಿಸಿದ್ದರು. ಆದರೆ ಅದನ್ನು ಗಂಭೀರವಾಗಿ ಪರಿಗಣಿಸದ ಪರಿಣಾಮ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನೆರ್ಜೀ ನೇತೃತ್ವದ ತೃಣಮೂಲ ಕಾಂಗ್ರೆಸ್ ಸೋಲು ಕಂಡಿದೆ” ಎಂದು ಅಭಿಪ್ರಾಯಪಟ್ಟರು.

ಲೋಕಸಭಾ ಚುನಾವಣೆಯ ವೇಳೆ ಸುಮಾರು 100 ಕ್ಷೇತ್ರಗಳಲ್ಲಿ ಮತ ಕಳವು ನಡೆದಿದೆ ಎಂಬ ಆರೋಪವನ್ನು ರಾಹುಲ್ ಗಾಂಧಿ ಮಾಡಿದ್ದರು. ಪಶ್ಚಿಮ ಬಂಗಾಳ ಮಾತ್ರವಲ್ಲದೆ ಕರ್ನಾಟಕ, ಮಧ್ಯಪ್ರದೇಶ ಮತ್ತು ಹರಿಯಾಣದಲ್ಲಿಯೂ ಅಕ್ರಮ ನಡೆದಿದೆ ಎಂದು ಅವರು ಹೇಳಿದ್ದರು.

“ಮಮತಾ ಬ್ಯಾನರ್ಜಿ ಅವರು ರಾಹುಲ್ ಗಾಂಧಿ ಜೊತೆ ಕುಳಿತು ಚರ್ಚೆ ನಡೆಸಿ ಬಿಜೆಪಿ ವಿರುದ್ಧ ತಂತ್ರ ರೂಪಿಸಬೇಕಿತ್ತು” ಎಂದು ಸಂಜಯ್ ರಾವುತ್ ತಿಳಿಸಿದ್ದಾರೆ.

Share This Article
Leave a Comment