ಅಂಬೇಡ್ಕರ್ ವಸತಿ ನಿಲಯದಲ್ಲಿ ಹಸಿವಿನಿಂದ ಪರದಾಡಿದ ವಿದ್ಯಾರ್ಥಿಗಳು ವಿದ್ಯಾರ್ಥಿಗಳ ಪ್ರತಿಭಟನೆಗೆ ಕ್ಯಾರೇ ಎನ್ನದ ಮೇಲಧಿಕಾರಿಗಳು : ಆರ್ಆ ಡಿ ಪೂಜಾರಿ ಆಕ್ರೋಶ.

 

ಅಫಜಲಪುರ: ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳ ದುಸ್ಥಿತಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ತಡ ರಾತ್ರಿ 10 ಗಂಟೆಯಾದರೂ ವಿದ್ಯಾರ್ಥಿಗಳಿಗೆ ಊಟ ನೀಡದಿರುವ ಘಟನೆ ಅಧಿಕಾರಿಗಳ ನಿರ್ಲಕ್ಷ್ಯವೆಂದು ವಿದ್ಯಾರ್ಥಿಗಳು ಕಿಡಿಕಾರಿದ್ದಾರೆ.

ರಾತ್ರಿ ಹಸಿವಿನಿಂದ ಬಳಲಿದ ವಿದ್ಯಾರ್ಥಿಗಳು ತಾಳ್ಮೆ ಕಳೆದುಕೊಂಡು ನೇರವಾಗಿ ವಸತಿ ನಿಲಯಕ್ಕೆ ಬಿಗ್ ಜಡಿದು ಪಟ್ಟಣದಲ್ಲಿರುವ ಅಂಬೇಡ್ಕರ್ ವೃತ್ತಕ್ಕೆ ಕಳಪೆ ಆಹಾರದ ಪೊಟ್ಟಣಗಳೊಂದಿಗೆ ಅಹೋರಾತ್ರ ಪ್ರತಿಭಟನೆ ನಡೆಸಿದರು.

ವಸತಿ ನಿಲಯದಲ್ಲಿ ಸಮರ್ಪಕ ಆಹಾರ, ಕುಡಿಯುವ ನೀರು,ಪ್ಯಾನ್ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಂಕಷ್ಟ ಅನುಭವಿಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಗಮನ ಹರಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ರಾತ್ರಿ 10 ಗಂಟೆಯಾದರೂ ಹಸಿವಿನಿಂದ ವಿದ್ಯಾರ್ಥಿಗಳು ಪರದಾಡುತ್ತಿರುವ ಸ್ಥಿತಿ ಕಂಡು ಸ್ಥಳೀಯರು ಮತ್ತು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಮಹಾಂತೇಶ್ ಬಳೂಂಡಗಿ, ಆರ್.ಡಿ. ಪೂಜಾರಿ, ಭೀಮರಾಯ ಗೌರ ಸೇರಿದಂತೆ ಅನೇಕ ಗಣ್ಯರು ವಸತಿ ನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳ ಅಳಲು ಆಲಿಸಿದರು. “ವಿದ್ಯಾರ್ಥಿಗಳಿಗೆ ಸಮಯಕ್ಕೆ ಊಟವೂ ನೀಡದಿರುವುದು ಅತ್ಯಂತ ಖಂಡನೀಯ. ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಮರೆತಿದ್ದಾರೆ” ಎಂದು ಅವರು ತರಾಟೆಗೆ ತೆಗೆದುಕೊಂಡರು.

ತಕ್ಷಣವೇ ವಿದ್ಯಾರ್ಥಿಗಳಿಗೆ ಸೂಕ್ತ ಆಹಾರ, ವಸತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು. ಇಲ್ಲವಾದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಮುಖಂಡರು ಎಚ್ಚರಿಕೆ ನೀಡಿದರು.

Share This Article
Leave a Comment