*ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ:* *ದೋಷರಹಿತ ಮತದಾರರ ಪಟ್ಟಿ ಸಿದ್ದಪಡಿಸಲು ಸಹಕರಿಸುವಂತೆ ಜಿಲ್ಲಾ ಚುನಾವನಾಧಿಕಾರಿ ಇಕ್ರಮ್ ಶರೀಫ್ ಮನವಿ*

 

ಕಲಬುರಗಿ,ಜೂ.2- ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯದಾದ್ಯಂತ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಪಟ್ಟಿ ತಯಾರಿಸುವ ಕುರಿತು ವೇಳಾಪಟ್ಟಿ ಪ್ರಕಟಿಸಿದ್ದು, ಅದರಂತೆ ಕಲಬುರಗಿ ಜಿಲ್ಲೆಯಲ್ಲಿ ದೋಷಪೂರಿತ ಸ್ವಚ್ಛ ಮತದಾರರ ಪಟ್ಟಿ ತಯ್ಯಾರಿಕೆಗೆ ರಾಜಕೀಯ ಪಕ್ಷಗಳು ಮುಖಂಡರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಇಕ್ರಮ್ ಶರೀಫ್ ಹೇಳಿದರು.

 

ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಭಾರತ ಚುನಾವಣಾ ಆಯೋಗವು ಎಸ್.ಐ.ಆರ್ ಮೂರನೇ ಹಂತದಲ್ಲಿ ಕರ್ನಾಟಕ ರಾಜ್ಯದಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಪಟ್ಟಿ ತಯಾರಿಸುವ ಕುರಿತು ವೇಳಾಪಟ್ಟಿ ಪ್ರಕಟಿಸಿದೆ. ಅದರಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಪ್ರಕ್ರಿಯೆ ಆರಂಭವಾಗಲಿದೆ ಎಂದಿದ್ದಾರೆ.

 

ದಿ.01-10-2026 ಅರ್ಹತಾ ದಿನಾಂಕವನ್ನಾಗಿ ಪರಿಗಣಿಸಿ ಈ ವಿಶೇಷ ಸಮಗ್ರ ಮತದಾರರ ಪರಿಷ್ಕರಣೆ ಕಾರ್ಯ ನಡೆಯಲಿದೆ. ಜೂನ್ 20 ರಿಂದ 29ರ ವರೆಗೆ ಚುನಾವಣಾ ಸಿಬ್ಬಂದಿಗೆ ತರಬೇತಿ, ಪೂರ್ವಸಿದ್ಧತೆ ಮುದ್ರಣ ಕಾರ್ಯ ಜರುಗಲಿದೆ. ಜೂನ್ 30 ರಿಂದ ಜುಲೈ 29ರ ವರೆಗೆ ಬಿ.ಎಲ್.ಓ.ಗಳು ಮನೆ-ಮನೆಗೆ ಭೇಟಿ ನೀಡಿ ವಿಉತರಿಸಿ ಸಂಗ್ರಹಣೆ ಮಾಡಲಿದ್ದಾರೆ. ಇದೇ ಅವಧಿಯಲ್ಲಿ ಮತಗಟ್ಟೆಗಳ ರೇಷನಲೈಸೇಷನ್ ಕಾರ್ಯ ಸಹ ಒಟ್ಟಿಗೆ ನಡೆಯಲಿದೆ. ಆಗಸ್ಟ್ 5ಕ್ಕೆ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ. ಕರಡು ಪಟ್ಟಿಗೆ ಆಗಸ್ಟ್ 5 ರಿಂದ ಸೆಪ್ಟೆಂಬರ್ 4ರ ವರೆಗೆ ಆಕ್ಷೇಪಣೆ ಆಹ್ವಾನಿಸಿ ಅಕ್ಟೋಬರ್ 3 ರೊಳಗೆ ಆಕ್ಷೇಪಣೆಗಳನ್ನು ವಿಲೇವಾರಿ ಮಾಡಿ ಕೊನೆಗೆ ಅಕ್ಟೋಬರ್ 7ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಎಸ್.ಐ.ಆರ್. ಕ್ಯಾಲೆಂಡರ್ ಘಟನಾವಳಿಗಳನ್ನು ವಿವರಿಸಿದರು.

 

ಕಲಬುರಗಿ ಜಿಲ್ಲೆಯಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಪಟ್ಟಿ ತಯಾರಿಕೆಗೆ ಸಂಬಂಧಿಸಿದಂತೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳಲ್ಲಿ 11,89,398 ಪುರುಷ, 11,84,171 ಮಹಿಳೆಯರು, 340 ಇತರೆ ಸೇರಿ ಒಟ್ಟು 23,73,909 ಮತದಾರರಿದ್ದು, 2,400 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಪ್ರತಿ ಮತಗಟ್ಟೆಗೆ ಬೂತ್ ಲೇವಲ್ ಆಫೀಸರ್ ನೇಮಕ ಮಾಡಲಾಗಿದ್ದು, ಬಿ.ಎಲ್.ಓ ಗಳ ಮೇಲೆ ಮೇಲುಸ್ತುವಾರಿಗೆ 275 ಜನರನ್ನು ಬಿ.ಎಲ್.ಓ ಸೂಪರ್‌ವೈಸರ್ ನೇಮಕ ಮಾಡಲಾಗಿದೆ.

 

ಇನ್ನೂ ಬೂತ್‌ವಾರು ಶುದ್ಧ ಮತದಾರರ ಪಟ್ಟಿ ಮತ್ತು ಮ್ಯಾಪಿಂಗ್ ಕಾರ್ಯಕ್ಕೆ ಸಹಕರಿಸಲು ಬೂತ್ ಲೇವೆಲ್ ಏಜೆಂಟರನ್ನು ನೇಮಕ ಮಾಡುವಂತೆ ಈಗಾಗಲೆ ರಾಜಕೀಯ ಪಕ್ಷಗಳಿಗೆ ಸೂಚಿಸಲಾಗಿದೆ. ಮನೆಗೆ ಬರುವ ಬಿ.ಎಲ್.ಓ. ಗಳಿಗೆ ಮತದಾರರು ಅಗತ್ಯ ಸಹಕಾರ ನೀಡಬೇಕೆಂದ ಅವರು, ಎಸ್.ಐ.ಆರ್ ಕುರಿತು ಸಾರ್ವಜನಿಕರಲ್ಲಿ ಯಾವುದೇ ರೀತಿ ಗೊಂದಲಗಳಿದ್ದಲ್ಲಿ ಆಯಾ ಮತಕ್ಷೇತ್ರದ ಮತದಾರರ ನೋಂದಣಾಧಿಕಾರಿಗಳನ್ನು ಸಂಪರ್ಕಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಇಕ್ರಮ್ ಶರೀಫ್ ತಿಳಿಸಿದ್ದಾರೆ.

 

*ಫೆಸಿಲಿಟೇಷನ್ ಸೆಂಟರ್ ಸ್ಥಾಪನೆ:*

 

2022ರ ಮತದಾರರ ಪಟ್ಟಿಗೆ 2025ರ ಮತದಾರರ ಪಟ್ಟಿಗೆ ಮ್ಯಾಪಿಂಗ್ ಮಾಡುವ ಎಸ್.ಐ.ಆರ್. ಕಾರ್ಯ ತೀವ್ರಗೊಳಿಸಲು ಬಿ.ಎಲ್.ಓ. ಹಂತದಲ್ಲಿ ಫೆಸಿಲಿಟೇಷನ್ ಸೆಂಟರ್ ಸ್ಥಾಪನೆ ಮಾಡಲಾಗುತ್ತಿದೆ. ಇದಲಕ್ಲೆ ಗ್ರಾಮೀಣ ವಿಭಾಗದಲ್ಲಿ ವೋಟರ್ ಫೆಸಿಲಿಟೇಷನ್ ಸೆಂಟರ್ ಸ್ಥಾಪನೆಗೆ ಜಿಲ್ಲಾ ಪಂಚಾಯತ್ ಸಿ.ಇ.ಓ ಅವರಿಗೆ ನಿರ್ದೇಶನ ನೀಡಲಾಗಿದೆ. ಬಿ.ಎಲ್.ಓ. ಮತ್ತು ಬಿ.ಎಲ್.ಎ.ಗಳ ಇದರ ಸದುಪಯೋಗ ಪಡೆದು ಪರಸ್ಪರ ಸಮನ್ವಯ ಎಸ್.ಐ. ಆರ್. ಕಾರ್ಯ ಯಾಶಸ್ವಿಗೊಳಸಿಬೇಕೆಂದು ಜಿಲ್ಲಾ ಚುನಾಔಣಾಧಿಕಾರಿ ಇಕ್ರಮ್ ಶರೀಫ್ ತಿಳೀಸಿದ್ದಾರೆ.

 

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ ರಾಜುಲ್ ಸಂಕನೂರ್, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತೆ ಸಾಹಿತ್ಯ ಆಲದಕಟ್ಟಿ ಇದ್ದರು.

Share This Article
Leave a Comment