
ಅಫಜಲಪುರ: ಪಟ್ಟಣದ ಪಿ.ಎಂ. ಶ್ರೀ ಸರಕಾರಿ ಮಾದರಿಯ ಕನ್ಯಾ ಪ್ರಾಥಮಿಕ ಶಾಲೆಯಲ್ಲಿ ರಾಜ್ಯ ಬಾಲ ಭವನ ಸೊಸೈಟಿ, ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕಲಬುರಗಿ, ಜಿಲ್ಲಾ ಹಾಗೂ ತಾಲೂಕು ಬಾಲ ಭವನ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮ ಜರುಗಿತು.ಕಾರ್ಯಕ್ರಮದಲ್ಲಿ 5 ರಿಂದ 16 ವರ್ಷದೊಳಗಿನ ಮಕ್ಕಳಿಗಾಗಿ ವಿವಿಧ ಕ್ರಿಯಾತ್ಮಕ ಚಟುವಟಿಕೆಗಳು ಹಾಗೂ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಸಿಡಿಪಿಒ ಚಂದ್ರಕಾಂತ ಹಿರೇಮಠ ಮಾತನಾಡಿ ಮಕ್ಕಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕಲಾ ಪ್ರತಿಭೆಯನ್ನು ಪ್ರದರ್ಶಿಸಿದರು.
“ಮಕ್ಕಳಲ್ಲಿರುವ ಸೃಜನಶೀಲತೆ ಮತ್ತು ಅಡಗಿರುವ ಪ್ರತಿಭೆಯನ್ನು ಹೊರತರುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಸ್ಪರ್ಧೆಗಳು ಮಕ್ಕಳ ಆತ್ಮವಿಶ್ವಾಸವನ್ನು ಹೆಚ್ಚಿಸುವುದರ ಜೊತೆಗೆ ಅವರ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುತ್ತವೆ. ಪ್ರತಿಯೊಬ್ಬ ಮಗುವಿಗೂ ತನ್ನ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶ ಸಿಗಬೇಕು”
“ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಕಲಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಮಹತ್ವದ ಪಾತ್ರ ವಹಿಸುತ್ತವೆ. ಮಕ್ಕಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದು ಸಂತಸದ ವಿಷಯ ಎಂದರು.
ಶಿಕ್ಷಕ ಸಂಗ್ರಾಮಗೌಡ ಪಾಟೀಲ ಮಾತನಾಡಿ ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುತ್ತವೆ” ಎಂದರು.
ಶಾಲೆಯ ಮುಖ್ಯಗುರು ಮಹ್ಮದ ನೂರುದ್ದೀನ್, ಶಿಕ್ಷಕ ಸಂಗ್ರಾಮಗೌಡ ಪಾಟೀಲ, ಅಂಗನವಾಡಿ ಮೇಲ್ವಿಚಾರಕರು ಹಾಗೂ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ವಿತರಿಸಿ ಅಭಿನಂದಿಸಲಾಯಿತು.ಈ ಸಂದರ್ಭದಲ್ಲಿ ಚಂದ್ರಕಾಂತ ಹಿರೇಮಠ, ಶಾರದಾ ಅವಟೆ, ಶಿವಲಿಲ್ಲಾ ಡೆಂಗಿ, ಮುಖ ಗುರು ನೂರುದ್ದಿನ, ಸಂಗ್ರಾಮ ಗೌಡ ಪಾಟೀಲ್, ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.