ಶೀಘ್ರದಲ್ಲಿ ಮೇಕೆದಾಟು ಯೋಜನೆಗೆ ಡಿಪಿಆ‌ರ್ : ಡಿ.ಕೆ. ಶಿವಕುಮಾ‌ರ್

 

ಪಿರಿಯಾಪಟ್ಟಣ ( ಮೈಸೂರು ಜಿಲ್ಲೆ): ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ಹೋರಾಟಕ್ಕೆ ಜಯ ಸಿಕ್ಕಿದ್ದು, ಹತ್ತು ದಿನದೊಳಗೆ ಕೇಂದ್ರಕ್ಕೆ ಯೋಜನೆಯ ಡಿಪಿಆ‌ರ್ ಸಲ್ಲಿಸಲಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ತಿಳಿಸಿದರು.

ಪಿರಿಯಾಪಟ್ಟಣದಲ್ಲಿ ಮಂಗಳವಾರ 419 ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮೇಕೆದಾಟು ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಲ್ಲೂ ಕರ್ನಾಟಕಕ್ಕೆ ನ್ಯಾಯ ಸಿಕ್ಕಿದೆ. ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರಿಗೆ ಶಕ್ತಿ ಇದ್ದರೆ ಯೋಜನೆ ಅನುಷ್ಠಾನಕ್ಕೆ ಸಹಕರಿಸಲಿ’ ಎಂದರು.

Share This Article
Leave a Comment