ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಚೈತ್ರಗೆ 91% ಫಲಿತಾಂಶ – ಟೀ ಕೆ ಹೇರೂರ್ ಶಾಲೆಯ ವಿದ್ಯಾರ್ಥಿಯ ಸಾಧನೆಗೆ ಹರ್ಷ.

 

ಅಫಜಲಪೂರ : 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕಲಬುರ್ಗಿ ಜಿಲ್ಲೆಯ ಅಫಜಲಪೂರ್ ತಾಲೂಕಿನ ದೇವಲ ಗಾಣಗಾಪೂ ಟಿ.ಕೆ. ಹೇರೂರ ಪ್ರೌಢಶಾಲೆಯ ವಿದ್ಯಾರ್ಥಿನಿ ಚೈತ್ರ ಉದಯಕುಮಾರ ಮೂರನೆತ್ತಿ ಅವರು 567 ಅಂಕಗಳನ್ನು ಗಳಿಸಿ ಶೇ. 91 ಫಲಿತಾಂಶ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

ಸರಳ ಕುಟುಂಬ ಹಿನ್ನೆಲೆಯಿಂದ ಬಂದಿರುವ ಚೈತ್ರ ಅವರು ಪರಿಶ್ರಮ ಮತ್ತು ಶಿಸ್ತುಬದ್ಧ ಅಧ್ಯಯನದ ಮೂಲಕ ಈ ಸಾಧನೆ ಮಾಡಿದ್ದಾರೆ. ನಿರಂತರ ಅಭ್ಯಾಸ, ಶಿಕ್ಷಕರ ಮಾರ್ಗದರ್ಶನ ಹಾಗೂ ಪೋಷಕರ ಪ್ರೋತ್ಸಾಹವೇ ತಮ್ಮ ಯಶಸ್ಸಿನ ಮೂಲ ಎಂದು ವಿದ್ಯಾರ್ಥಿನಿ ತಿಳಿಸಿದ್ದಾಳೆ. ಭವಿಷ್ಯದಲ್ಲಿ ಉನ್ನತ ಶಿಕ್ಷಣ ಪಡೆದು ಸಮಾಜಕ್ಕೆ ಉಪಯುಕ್ತ ವ್ಯಕ್ತಿಯಾಗುವ ಕನಸನ್ನು ಹೊಂದಿರುವುದಾಗಿ ಅವಳು ಹೇಳಿದ್ದಾರೆ.

ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯಲ್ಲೂ ಹರ್ಷದ ವಾತಾವರಣ ನಿರ್ಮಾಣವಾಗಿದೆ. ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಭಗವಂತಪ್ಪ ಹೇರೂರ, ಕಾರ್ಯದರ್ಶಿ ಲಕ್ಷ್ಮಣ ಹೇರೂರ, ಮುಖ್ಯ ಶಿಕ್ಷಕ ರಾಜಶೇಖರ ತಲಾರಿ ಸೇರಿದಂತೆ ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ವರ್ಗ ಚೈತ್ರ ಅವರಿಗೆ ಅಭಿನಂದನೆ ಸಲ್ಲಿಸಿ, ಮುಂದಿನ ವಿದ್ಯಾಭ್ಯಾಸದಲ್ಲೂ ಇದೇ ರೀತಿಯ ಸಾಧನೆ ಮುಂದುವರಿಸಲಿ ಎಂದು ಹಾರೈಸಿದ್ದಾರೆ.

ಸ್ಥಳೀಯರು ಹಾಗೂ ಗ್ರಾಮಸ್ಥರೂ ವಿದ್ಯಾರ್ಥಿನಿಯ ಸಾಧನೆಯನ್ನು ಮೆಚ್ಚಿ ಅಭಿನಂದನೆ ವ್ಯಕ್ತಪಡಿಸಿದ್ದಾರೆ. ಈ ಸಾಧನೆ ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ ಎಂದು ಶಾಲಾ ವಲಯ ಆಶಿಸಿದೆ.

Share This Article
Leave a Comment