ನಾಲ್ಕು ಮಕ್ಕಳಿರಲಿ, ಒಂದನ್ನು ಆರ್‌ಎಸ್‌ಎಸ್‌ಗೆ ನೀಡಿ: ಧೀರೇಂದ್ರ ಕೃಷ್ಣ ಶಾಸ್ತ್ರಿ

ಮುಂಬೈ: ‘ಮರಾಠರ ರಾಜ ಛತ್ರಪತಿ ಶಿವಾಜಿ ಮಹಾರಾಜ ತಮ್ಮ ರಾಜ್ಯವನ್ನು ತತ್ವಜ್ಞಾನಿ ಹಾಗೂ ಆಧ್ಯಾತ್ಮಿಕ ಗುರು ಸಮರ್ಥ ರಾಮದಾಸ ಅವರಿಗೆ ಅರ್ಪಿಸಲು ಮುಂದಾಗಿದ್ದರು’ ಎಂದು ಮಧ್ಯಪ್ರದೇಶದ ಬಾಗೇಶ್ವರ ಧಾಮದ ಪೀಠಾಧೀಶ ಧೀರೇಂದ್ರ ಕೃಷ್ಣ ಶಾಸ್ತ್ರಿ ಹೇಳಿದ್ದಾರೆ.

‘ಭಾರತೀಯರು ನಾಲ್ಕು ಮಕ್ಕಳನ್ನು ಹೆರಬೇಕು, ಅದರಲ್ಲಿ ಒಂದು ಮಗುವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಗೆ ನೀಡಬೇಕು’ ಎಂದು ಇದೇ ವೇಳೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಾಗಪುರದಲ್ಲಿ ಶುಕ್ರವಾರ ರಾತ್ರಿ ನಡೆದ ‘ಭಾರತ್ ದುರ್ಗಾ ಶಕ್ತಿಸ್ಥಳ’ ದೇವಾಲಯದ ಶಂಕುಸ್ಥಾಪನೆ ಹಾಗೂ ಧರ್ಮಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಈ ಹೇಳಿಕೆ ನೀಡಿದ್ದಾರೆ.

ಈ ಕಾರ್ಯಕ್ರಮದಲ್ಲಿ ಮೋಹನ್ ಭಾಗವತ್, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಮತ್ತು ಕೇಂದ್ರ ಹೆದ್ದಾರಿ ಹಾಗೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

Share This Article
Leave a Comment