ಮೋದಿ ವಿರುದ್ಧ ಖರ್ಗೆ ಟೀಕೆ: ಕ್ಷಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

 

 

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧಎ ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಯೋತ್ಪಾದಕ ಎಂಬ ಹೇಳಿಕೆ ನೀಡಿದ್ದು, ಕೂಡಲೇ ತಮ್ಮ ಮಾತನ್ನು ಹಿಂಪಡೆದು ಕ್ಷಮೆ ಕೋರಬೇಕು ಎಂದು ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಕ್ಷದ ರಾಜ್ಯ ಕಾರ್ಯದರ್ಶಿ ಬಸವರಾಜ ಮತ್ತಿಮಡು, ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ಪಕ್ಷದ ನಗರ ಘಟಕದ ಅಧ್ಯಕ್ಷ ಚಂದು ಪಾಟೀಲ, ಗ್ರಾಮಾಂತರ ಘಟಕದ ಅಧ್ಯಕ್ಷ ಅಶೋಕ ಬಗಲಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ಕಾರ್ಯಕರ್ತರು ಮೆರವಣಿಗೆ ನಡೆಸಿದರು.ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಅವರನ್ನು ತಮಿಳುನಾಡಿನ ಚೆನ್ನೈನಲ್ಲಿ ಭಯೋತ್ಪಾದಕ ಎಂದು ಹೀಯಾಳಿಸುವ ಮೂಲಕ ಅವಮಾನ ಮಾಡಿದ್ದಾರೆ. ಆ ನಂತರವೂ ಹಾರಿಕೆಯ ಹೇಳಿಕೆ ಕೊಟ್ಟಿದ್ದಾರೆ. ತಮ್ಮ ತಪ್ಪಿಗಾಗಿ ಖರ್ಗೆ ಅವರು ದೇಶದ ಜನತೆಯೆ ಕ್ಷಮೆ ಕೇಳಬೇಕು’ ಎಂದು ಒತ್ತಾಯಿಸಿದರು.

Share This Article
Leave a Comment