ಕಲಬುರಗಿಯಲ್ಲಿ ಎಸ್ಸೆಸ್ಸೆಲ್ಸಿ ಟಾಪರ್‌ಗಳಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ.

 

ಕಲಬುರಗಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಸಾಧನೆ ಮೆರೆದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಬಿ. ಫೌಝಿಯಾ ತರನ್ನುಮ್ ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಿದರು.625 ಅಂಕಗಳ ಪೈಕಿ 623 ಅಂಕಗಳನ್ನು ಪಡೆದು ಶೇ. 99.68 ಫಲಿತಾಂಶದೊಂದಿಗೆ ಜಿಲ್ಲೆಯ ಪ್ರಥಮ ಸ್ಥಾನ ಪಡೆದ ಸಾವಳಗಿಯ ಅಜೀಮ್ ಪ್ರೇಮ್‌ಜಿ ಶಾಲೆಯ ಗಣೇಶ್ ಅವರಿಗೆ ವಿಶೇಷವಾಗಿ ಅಭಿನಂದನೆ ಸಲ್ಲಿಸಲಾಯಿತು.ತಲಾ 622 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಪಡೆದ ಶರಣಬಸವೇಶ್ವರ ವಸತಿ ಶಾಲೆಯ ವಿದ್ಯಾರ್ಥಿನಿಯರಾದ ಮಾಧವಿ ಮತ್ತು ಮೇಘನಾ ಅವರ ಸಾಧನೆಯನ್ನು ಜಿಲ್ಲಾಧಿಕಾರಿಗಳು ಶ್ಲಾಘಿಸಿದರು.

ಇನ್ನು, 620 ಅಂಕಗಳನ್ನು ಪಡೆದು ತೃತೀಯ ಸ್ಥಾನ ಪಡೆದ ಜಗತ್ ಪ್ರದೇಶದ ಎಸ್‌ಸಿ, ಎಸ್‌ಟಿ ಪ್ರತಿಭಾನ್ವಿತ ಶಾಲೆಯ ಭಾಗ್ಯಶ್ರೀ, ಎಸ್‌ಆರ್‌ಎನ್ ಮೆಹತಾ ಶಾಲೆಯ ಓಂಕಾರ ಹಾಗೂ ಜೇವರ್ಗಿ ತಾಲೂಕಿನ ಆದರ್ಶ ವಿದ್ಯಾಲಯದ ನಿಸರ್ಗಾ ಅವರನ್ನೂ ಸನ್ಮಾನಿಸಲಾಯಿತು.ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ, ವಿದ್ಯಾರ್ಥಿಗಳು ತಮ್ಮ ಸಾಧನೆಯಲ್ಲಿ ತೃಪ್ತಿಪಡದೆ ಮುಂದಿನ ಗುರಿಗಳನ್ನು ಇನ್ನಷ್ಟು ಎತ್ತರದಲ್ಲಿ ಇಟ್ಟು ಪರಿಶ್ರಮಪಟ್ಟು ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಉತ್ಸಾಹ ಹೆಚ್ಚಿಸಿ, ಭವಿಷ್ಯದ ಸಾಧನೆಗಳಿಗೆ ಪ್ರೇರಣೆಯಾಯಿತು.

Share This Article
Leave a Comment