ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣ: ವಿದ್ಯಾಗಿರಿ ಇನ್‌ಸ್ಪೆಕ್ಟರ್ ರಫಿಕ್ ಅಮಾನತು.

 

 

ಧಾರವಾಡ: ಬಿಎಸ್‌ಸಿ ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ಕ್ರಮ ಕೈಗೊಳ್ಳಲಾಗಿದೆ. ನಗರದ ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮೊಹಮ್ಮದ್ ರಫಿಕ್ ಅವರನ್ನು ಅಮಾನತುಗೊಳಿಸಲಾಗಿದೆ.

ಈ ಪ್ರಕರಣದಲ್ಲಿ ಈಗಾಗಲೇ ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದ್ದು, ಪ್ರಕರಣ ಗಂಭೀರತೆ ಪಡೆದುಕೊಂಡಿದೆ.

ಗಾಂಜಾ ಪ್ರಕರಣದ ವಿಚಾರಣೆಯ ವೇಳೆ ಆದಿತ್ಯನಿಂದ ₹2,000 ಹಣ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಕೇಳಿಬಂದಿದ್ದು, ಇದರ ಬಗ್ಗೆ ತನಿಖೆ ಚುರುಕುಗೊಳಿಸಲಾಗಿದೆ.

ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದು, ಪ್ರಕರಣದ ಸತ್ಯಾಸತ್ಯತೆ ಪತ್ತೆಹಚ್ಚಲು ಇಲಾಖೆ ಮಟ್ಟದಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪ್ರಕರಣದ ಮುಂದಿನ ತನಿಖೆ ಮುಂದುವರಿದಿದ್ದು, ಇನ್ನಷ್ಟು ಕ್ರಮಗಳ ಸಾಧ್ಯತೆ ಇದೆ.

Share This Article
Leave a Comment