ಕಲಬುರಗಿ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಾಗೂ ಜಿಲ್ಲಾ ಪಂಚಾಯಿತಿ ಆಶ್ರಯದಲ್ಲಿ ಮಹಾಸಾದ್ವಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಕಾರ್ಯಕ್ರಮವನ್ನು ಮೇ 10ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸುವರು. ಶಾಸಕ ಅಲ್ಲಮಪ್ರಭು ಪಾಟೀಲ ಅಧ್ಯಕ್ಷತೆ ವಹಿಸುವರು. ಸಚಿವರು, ಶಾಸಕರು, ಅಧಿಕಾರಿಗಳು ಸೇರಿದಂತೆ ಗಣ್ಯರು ಪಾಲ್ಗೊಳ್ಳುವರು. ಹೊಸಪೇಟೆ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಗುರು ಶೇಖರ್ ಗಿರಡ್ಡಿ ಇಳಕಲ್ ವಿಶೇಷ ಉಪನ್ಯಾಸ ನೀಡುವರು.