ನವದೆಹಲಿ, ಮೇ 17: ಆಟೋ, ಟ್ಯಾಕ್ಸಿ ಚಾಲಕರಿಗೆಕೇಂ ದ್ರ ಸರ್ಕಾರ ಮತ್ತೆ CNG ದರ ಏರಿಕೆ ಶಾಕ್ ನೀಡಿದ್ದು, ನೈಸರ್ಗಿಕ ಅನಿಲ(CNG) ಬೆಲೆ ಮತ್ತೆ 1 ರೂಪಾಯಿ ಏರಿಕೆಯಾಗಿದೆ. 2 ದಿನಗಳ ಹಿಂದಷ್ಟೇ ಕೆಜಿ CNG ದರ 2 ರೂಪಾಯಿಗೆ ಏರಿಕೆ ಕಂಡಿತ್ತು. ಆ ಬೆನ್ನಲ್ಲೇ 48 ಗಂಟೆಗಳಲ್ಲಿ 2ನೇ ಬಾರಿಗೆ ಸಿನ್ಗ್ ದರವನ್ನು ಕೇಂದ್ರ ಸರ್ಕಾರ ಹೆಚ್ಚಳ ಮಾಡಿದೆ. ಆ ಮೂಲಕ ರಾಷ್ಟ್ರ ರಾಜಧಾನಿಯಲ್ಲಿ ಪ್ರತಿ ಕೆಜಿ ಸಿಎನ್ ಜಿ ದರ 80.09 ರೂಪಾಯಿಗಳಿಗೆ ತಲುಪಿದೆ. ಈ ಹಿಂದೆ 2 ರೂ. ಏರಿಕೆಯ ಬಳಿಕ CNG ದರ 77.09
ರೂ.ಗಳಿಂದ 79.09ಕ್ಕೆ ಏರಿಕೆಯಾಗಿತ್ತು.
ಕೇಂದ್ರ ಸರ್ಕಾರ ಮತ್ತೆ CNG ದರವನ್ನು ಕೆಜಿಗೆ 1 ರೂಪಾಯಿ ಹೆಚ್ಚಳ ಮಾಡಿದೆ. ಕೇವಲ 48 ಗಂಟೆಗಳಲ್ಲಿ ಇದು ಎರಡನೇ ಏರಿಕೆಯಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಪ್ರತಿ ಕೆಜಿ CNG ದರ 80.09 ರೂಪಾಯಿಗೆ ತಲುಪಿದೆ. ಈ ನಿರಂತರ ಏರಿಕೆಯಿಂದ ಆಟೋ ಮತ್ತು ಟ್ಯಾಕ್ಸಿ ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಇಂಧನ ವೆಚ್ಚ ಸಮತೋಲನಗೊಳಿಸಲು ದರ ಪರಿಷ್ಕರಣೆಯ ಅನಿವಾರ್ಯತೆ ಎದುರಾಗಿದೆ ಎಂದವರು ಅಲವತ್ತುಕೊಂಡಿದ್ದಾರೆ.