ಇಂದು ರಾಜೀವಗಾಂಧಿ ಪುಣ್ಯ ದಿನಾಚರಣೆ.

 

ಕಲಬುರ್ಗಿ, ಮೇ.೨೦- ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಮೇ ೨೧ರಂದು ಬೆಳಿಗ್ಗೆ ಹತ್ತು ಗಂಟೆಗೆ ಮಾಜಿ ಪ್ರಧಾನಿ ದಿ. ರಾಜೀವಗಾಂಧಿಯವರ ಪುಣ್ಯದಿನವನ್ನು ಆಚರಣೆ ಮಾಡಲಾಗುವುದು ಎಂದು ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ರಾಜ್ಯ ವಿಧಾನ ಪರಿಷತ್ ಸದಸ್ಯ ಜಗದೇವ್ ಗುತ್ತೇದಾರ್ ಕಾಳಗಿ ಅವರು ತಿಳಿಸಿದ್ದಾರೆ.

ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಎಲ್ಲ ಹಾಲಿ ಹಾಗೂ ಮಾಜಿ ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಹಾಗೂ ಡಿಸಿಸಿ ಪದಾಧಿಕಾರಿಗಳು, ಮುಖಂಡರು, ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರು, ಡಿಸಿಸಿ ಡೇಲಿಗೇಟ್ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ವಿವಿಧ ಮೂಂಚೂಣಿ ಘಟಕ, ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಪಕ್ಷದ ಪುರ ಪಂಚಾಯಿತಿ, ಎಪಿಎಂಸಿಯ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಮಹಾ ನಗರ ಪಾಲಿಕೆಯ ಹಾಲಿ ಹಾಗೂ ಮಾಜಿ ಮಹಾಪೌರರು, ಉಪ ಮಹಾಪೌರರು ಹಾಗೂ ಸದಸ್ಯರುಗಳು, ಮಹಿಳೆಯರು, ಯುವಕರು ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಆಗಮಿಸಬೇಕೆಂದು ಅವರು ಹೇಳಿಕೆಯಲ್ಲಿ ಕೋರಿದ್ದಾರೆ.

Share This Article
Leave a Comment