ಬಕ್ರೀದ್: ಅಕ್ರಮ ಗೋಸಾಗಾಟ, ಗೋಹತ್ಯೆ ತಡೆಗೆ ಆಗ್ರಹ.

 

ಬೀದರ್, ಮೇ.೨೧- ಮೇ ೨೮ರಂದು ನಡೆಯಲಿರುವ ಬಕ್ರಿದ್ ಹಬ್ಬದ ಸಂದರ್ಭದಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಅಕ್ರಮವಾಗಿ ಗೋವು, ಎಮ್ಮೆ ಹಾಗೂ ಕರುಗಳ ಸಾಗಾಟ ಮತ್ತು ಕಾನೂನು ಬಾಹಿರ ಗೋಹತ್ಯೆ ನಡೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಗುರುವಾರ ಹಿಂದೂ ಜನಜಾಗೃತಿ ಸಮಿತಿ ಜಿಲ್ಲಾ ಸಂಯೋಜಕ ಶ್ರೀಕಾಂತ್ ಮೋದಿ ಅವರು ಜಿಲ್ಲಾಧಿಕಾರಿಗಳ ಮುಖಾಂತರ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಮತ್ತು ಗೋಸಂರಕ್ಷಣಾ ಕಾಯಿದೆ ಇದ್ದರೂ ಸಹ, ಹಿಂದಿನ ವರ್ಷಗಳಲ್ಲಿ ಕೆಲವು ಕಡೆಗಳಲ್ಲಿ ರಸ್ತೆ ಬದಿ, ಜನವಸತಿ ಪ್ರದೇಶಗಳು ಹಾಗೂ ತಾತ್ಕಾಲಿಕ ಶೆಡ್‌ಗಳಲ್ಲಿ ಕಾನೂನು ಬಾಹಿರವಾಗಿ ಗೋಹತ್ಯೆ ನಡೆದಿರುವ ಬಗ್ಗೆ ದೂರುಗಳು ಬಂದಿವೆ ಎಂದು ಸಮಿತಿಯು ತಿಳಿಸಿದೆ. ಇಂತಹ ಕೃತ್ಯಗಳು ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡುವುದರ ಜೊತೆಗೆ ಹಿಂದೂ ಸಮಾಜದ ಧಾರ್ಮಿಕ ಭಾವನೆಗಳಿಗೂ ನೋವುಂಟು ಮಾಡುತ್ತವೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ತಕ್ಷಣ ವಿಶೇಷ ಪೊಲೀಸ್ ಹಾಗೂ ಆಡಳಿತಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು. ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ವಿಶೇಷ ಚೆಕ್‌ಪೋಸ್ಟ್ಗಳನ್ನು ಸ್ಥಾಪಿಸಿ, ಪಶು ಸಾಗಾಟ ವಾಹನಗಳ ಕಟ್ಟುನಿಟ್ಟಿನ ತಪಾಸಣೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

ಪಶು ಸಾಗಾಟಕ್ಕೆ ಸಂಬAಧಿಸಿದ ದಾಖಲೆಗಳು, ಪರವಾನಗಿಗಳು ಹಾಗೂ ಕಾನೂನುಬದ್ಧ ನಿಯಮಗಳನ್ನು ಪರಿಶೀಲಿಸಿ, ಅಕ್ರಮ ಸಾಗಾಟ ಕಂಡುಬAದಲ್ಲಿ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು. ರಸ್ತೆ ಬದಿ, ಜನವಸತಿ ಪ್ರದೇಶಗಳು ಹಾಗೂ ತಾತ್ಕಾಲಿಕ ಸ್ಥಳಗಳಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಗೋಹತ್ಯೆಗೆ ಅವಕಾಶ ನೀಡಬಾರದು ಎಂದು ಅವರು ಆಗ್ರಹಿಸಿದರು.

ರಾಜ್ಯದ ಎಲ್ಲ ಪೊಲೀಸ್ ಠಾಣೆಗಳು ಹಾಗೂ ಜಿಲ್ಲಾ ಆಡಳಿತಗಳಿಗೆ ವಿಶೇಷ ಸೂಚನೆ ನೀಡಿ, ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಭದ್ರತೆ ಒದಗಿಸಬೇಕು. ಅಕ್ರಮ ಗೋಸಾಗಾಟ ಮತ್ತು ಗೋಹತ್ಯೆಯಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಪ್ರಕರಣ ದಾಖಲಿಸಬೇಕು. ರಾಜ್ಯದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಹಾಗೂ ಸಾಮಾಜಿಕ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಸರ್ಕಾರವು ತಕ್ಷಣ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಗೋ ಸೇವಾ ಗತಿವಿಧಿ, ಕರ್ನಾಟಕ ಉತ್ತರ ಪ್ರಾಂತ ಸಹ ಸಂಯೋಜಕರಾದ ಚನ್ನಬಸವಂತ ರೆಡ್ಡಿ, ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸಹ ಸಂಯೋಜಕರಾದ ಗೋಪಾಲ್ ಕೃಷ್ಣ ಕುಕಡಾಲ್, ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಸಾಮಾಜಿಕ ಜಾಲತಾಣ ಸಂಯೋಜಕರಾದ ಮಾಯಾವತಿ ಕೋಟೆ, ಮಂಜುಳಾ ಸ್ವಾಮಿ, ವೆಂಕಟೇಶ್ ಚಿದ್ರಿ, ಸಂಗಮೇಶ, ಸಿದ್ರಾಮ್ ಅನಂದೇ, ಸಂದೀಪ್ ಪಾಟೀಲ್, ವನರಾಜ್, ಮಾಣಿಕ್, ವಿಠ್ಠಲ್, ಸಂತೋಷ್, ಸತೀಶ್, ಬಾಬುಗಿರಿ, ಪ್ರಕಾಶ್, ವಿಶ್ವನಾಥ್ ಉಪ್ಪೆ, ಕೃಷ್ಣ ಬಚ್ಚಾ, ದಿಲೀಪ್ ಕಮಠಾಣೆ ಸೇರಿದಂತೆ ಹಲವರು ಉಪಸ್ಥಿತರಿದ್ದರು

Share This Article
Leave a Comment