ಅಂಬೇಡ್ಕರ್ ತತ್ವ ಸಿದ್ಧಾಂತಗಳು ಜಗತ್ತಿಗೆ ಮಾದರಿ : ಅರುಣಕುಮಾರ ಪಾಟೀಲ್.

oppo_0

 

ಅಫಜಲಪುರ : ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳು ಕೇವಲ ಭಾರತಕ್ಕೆ ಮಾತ್ರವಲ್ಲ, ಇಡೀ ಜಗತ್ತಿಗೆ ಮಾದರಿಯಾಗಿವೆ ಎಂದು ಕೆಕೆಆರ್‌ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ್ ಹೇಳಿದರು.

ತಾಲೂಕಿನ ಮದರಾ ಬಿ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡಾ. ಅಂಬೇಡ್ಕರ್ ಅವರು ಸಮಾನತೆ, ಶಿಕ್ಷಣ, ಸಾಮಾಜಿಕ ನ್ಯಾಯ ಹಾಗೂ ಮಾನವೀಯ ಮೌಲ್ಯಗಳಿಗಾಗಿ ಹೋರಾಟ ನಡೆಸಿ ದೇಶಕ್ಕೆ ಶಕ್ತಿಯುತ ಸಂವಿಧಾನ ನೀಡಿದ್ದಾರೆ. ಪ್ರತಿಯೊಬ್ಬರೂ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಹೇಳಿದರು.

ಇಂದಿನ ಯುವಕರು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಅಂಬೇಡ್ಕರ್ ಅವರು ಶಿಕ್ಷಣವೇ ಸಮಾಜ ಪರಿವರ್ತನೆಯ ಅಸ್ತ್ರ ಎಂದು ತಿಳಿಸಿದ್ದರು. ಅವರ ವಿಚಾರಧಾರೆಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಷ ಬ್ರ ಶ್ರೀ ಸಿದ್ದರಾಮ ಶಿವಾಚಾರ್ಯರು ಚೀಣಮಗೇರ, ಬಂತೇಜಿ,ಮಾಜಿ ಸಚಿವ ಮಾಲೀಕಯ್ಯಾ ಗುತ್ತೇದಾರ, ಮಾಜಿ ಜಿ ಪಂ ಅಧ್ಯಕ್ಷ ನಿತೀನ್ ಗುತ್ತೇದಾರ, ವಿಜಯ ಕುಮಾರ ಸಾಲಿಮನಿ, ಮಲ್ಲಿಕಾರ್ಜುನ ಖರ್ಗೆ, ರಾಜು ಆರೇಕಾರ್,ಗ್ರಾಮದ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಅನೇಕ ಯುವಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Share This Article
Leave a Comment