ಮೊಬೈಲ್ ಯುಗದಲ್ಲಿ ಮಸುಕಾಗುತ್ತಿರುವ ಜನಪದ ಕಲೆ, ಸಂಸ್ಕೃತಿ ಉಳಿಸಿ: ಚೆನ್ನಶೆಟ್ಟಿ.

 

ಬೀದರ್, ಮೇ.೨೫- ನಾವೆಲ್ಲರೂ ರಾಜ್ಯ, ಭಾಷೆ, ಪ್ರಾಂತ್ಯ, ನಾಡು ನುಡಿ ಬಗ್ಗೆ ಹೇಗೆ ಹೆಮ್ಮೆ ಪಡುತ್ತೇವೆ. ಅದೇ ರೀತಿಯಲ್ಲಿ ನಮ್ಮ ಗಡಿ ಭಾಗದ ಬಗ್ಗೆ ಸಹ ಹೆಮ್ಮೆಪಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸುರೇಶ ಚೆನ್ನಶೆಟ್ಟಿ ಅವರು ಹೇಳಿದರು.

ನಗರದ ಮೈಲೂರ ಕ್ರಾಸ್ ಬಳಿಯ ಕೃಷ್ಣ ಉಡುಪಿ ಹೊಟೇಲ್‌ನಲ್ಲಿರುವ ಮಹಾ ಲಕ್ಷಿö್ಮÃ ಸಾಂಸ್ಕೃತಿಕ ಭವನದಲ್ಲಿ ಸಾಹಿತ್ಯರತ್ನ ಅಣ್ಣಾಭಾವು ಸಾಠೆ ಸಾಂಸ್ಕೃತಿಕ ಮತ್ತು ಸಾಹಿತಿಕ ಲೋಕಮಂಚ್ ಟ್ರಸ್ಟ್, ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರದಲ್ಲಿ ೨೦೨೫-೨೬ನೇ ಸಾಲಿನ ಸಾಮಾನ್ಯ ಸಂಘ ಸಂಸ್ಥೆಗಳ ಸಾಂಸ್ಕೃತಿ ಚಟುವಟಿಕೆಗೆ ಧನ ಸಹಾಯ ಯೋಜನೆಯಡಿಯಲ್ಲಿ ಹಮ್ಮಿಕೊಂಡಿದ್ದ ಜಾನಪದ ಸಂಭ್ರಮ ಕವಿಗೋಷ್ಠಿ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ವಿಶೇಷವಾಗಿ ಯುವ ಪೀಳಿಗೆಗೆ ಜನಪದ ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಮೌಲ್ಯಗಳ ಪರಿಚಯ ಮಾಡಿಕೊಡುವ ಕಾರ್ಯಗಳು ನಿರಂತರವಾಗಿ ನಡೆಯಬೇಕು ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಅವರು ಮಾತನಾಡಿ, ಜನಪದ ಕಲೆ, ಸಾಹಿತ್ಯ, ಸಂಗೀತ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ. ಕಲಾವಿದರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳು ಹಾಗೂ ಯೋಜನೆಗಳನ್ನು ತಲುಪಿಸಲು ಇಲಾಖೆ ಸದಾ ಬದ್ಧವಾಗಿದೆ ಎಂದು ಹೇಳಿದರು.

ಅಣ್ಣಾಭಾವು ಸಾರೆ ಸಾಂಸ್ಕೃತಿಕ ಮತ್ತು ಸಾಹಿತಿಕ ಲೋಕಮಂಚ್ ಟ್ರಸ್ಟ್ ಅಧ್ಯಕ್ಷ ಎಂ,ಎಸ್, ಮನೋಹರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾಹಿತ್ಯ ಮತ್ತು ಸಂಸ್ಕೃತಿ ಸಮಾಜದ ಅಸ್ತಿತ್ವವನ್ನು ಉಳಿಸುವ ಶಕ್ತಿಯಾಗಿದ್ದು, ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಕನ್ನಡ ನಾಡಿನ ಪರಂಪರೆ ಹಾಗೂ ಜನಪದ ಕಲೆಯನ್ನು ಜೀವಂತವಾಗಿಡುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಯಾರಾದರು ದಾನಿಗಳು ಸಹಾಯ ಸಹಕಾರ ಮಾಡಿದರೇ ನಮ್ಮ ಸಂಘ ಇರುವರೆಗೂ ಪ್ರಶಸ್ತಿ ಹಾಗೂ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಪ್ರತಿವರ್ಷ ಒಂದು ಪುಸ್ತಕ ಪ್ರಕಟಿಸುವಂತೆ ಕೆಲಸ ಮಾಡಲಾಗುವುದು ಎಂದರು.

ಪAಚಾಯಿತಿ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಖಚಾಂಚಿ ಶರತಕುಮಾರ್ ಅಭಿಮಾನ, ಜೆಸ್ಕಾಂ ಬೀದರನ ಲೆಕ್ಕಾಧಿಕಾರಿ ಸುಮಂತ ಕಟ್ಟಿಮನಿ, ಹಿರಿಯ ಕಲಾವಿದರಾದ ಶಂಭುಲಿAಗ ವಾಲ್ದೊಡ್ಡಿ ಅವರು ಮಾತನಾಡಿದರು, ಜಿಲ್ಲಾ ಅಂಗವಿಕಲ ಕಲ್ಯಾಣ ಅಧಿಕಾರಿ ಸುಭಾಷ ರತ್ನ ಸೇರಿ ಇತರರು ವೇದಿಕೆ ಮೇಲೆ ಉಪಸ್ಥಿತರಿದ್ದರು. ಸುಮಂತ ಕಟ್ಟಿಮನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರವೀಣ್ ಚಂದ್ರ ಅವರು ಸ್ವಾಗತಿಸಿದರು. ಸಮೃತ ಸೂರ್ಯವಂಶಿ ಅವರು ವಂದಿಸಿದರು.

ಕಾರ್ಯಕ್ರಮದ ನಂತರ ಪ್ರಚಲಿತ ವಿದ್ಯಮಾನಗಳ ಕುರಿತು ಕವಿಗೋಷ್ಠಿ ನಡೆಯಿತು. ಹಿರಿಯ ಸಾಹಿತಿ ಎಂ. ಜಿ. ದೇಶಪಾಂಡೆ ಉದ್ಘಾಟಿಸಿದರು, ಹಿರಿಯ ಸಾಹಿತಿ ಗುರುನಾಥ ಅಕ್ಕಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು

Share This Article
Leave a Comment