0-5 ವರ್ಷದೊಳಗಿನ ಮಕ್ಕಳು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಿ ಜಿಲ್ಲಾಧಿಕಾರಿ ಮಹ್ಮದ್ ಇಕ್ರಮುಲ್ಲಾ ಶರೀಫ

 

ಕಲಬುರಗಿ, ಮೇ.26 – ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಜೂ.28ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಿ. ‘ಹೈ ರಿಸ್ಕ್’ ಪ್ರದೇಶಗಳಾದ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಹಾಗೂ ಹೆದ್ದಾರಿಗಳ ಚೆಕ್‌ಪೋಸ್ಟ್ಗಳ ಮೇಲೆ ತೀವ್ರ ನಿಗಾವಹಿಸಿ ಎಂದು ಜಿಲ್ಲಾಧಿಕಾರಿ ಮಹ್ಮದ್ ಇಕ್ರಮೂಲ್ಲಾ ಶರೀಫ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಂದ ಜಾಥಾ ಕಾರ್ಯಕ್ರಮ ಆಯೋಜಿಸಬೇಕು. ಎಂದು ಹೇಳಿದರು.28 ರಂದು ಜಿಲ್ಲಾದ್ಯಂತ ಬೂತ್‌ಗಳಲ್ಲಿ ಲಸಿಕೆ ಹಾಕಲಾಗುವುದು. ಜೂ 29,30, ಜುಲೈ 1 ರವರೆಗೆ ಮೂರು ದಿನಗಳ ಕಾಲ 1,475 ತಂಡಗಳು ಲಸಿಕೆ ಹಾಕದ ಮಕ್ಕಳನ್ನು ಪತ್ತೆ ಮಾಡಲು ಮನೆ ಮನೆಗೆ ಭೇಟಿ ನೀಡಿ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಲಸಿಕೆ ನೀಡಬೇಕು. ಯಾವುದೇ ಕಾರಣಕ್ಕೂ ಮಗುವೂ ಲಸಿಕೆಯಿಂದ ವಂಚಿತವಾಗಬಾರದು ಎಂದು ಹೇಳಿದರು.

ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿ 5 ವರ್ಷದೊಳಗಿನ ಒಟ್ಟು ಅಂದಾಜು 3,51,716 ಮಕ್ಕಳಿಗೆ ಲಸಿಕೆ ಹಾಕಲು ಗುರಿ ನೀಡಲಾಗಿದೆ. ಮಕ್ಕಳಿಗೆ ಲಸಿಕೆಗಳನ್ನು ನೀಡಲು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ 1,519 ಲಸಿಕಾ ಕೇಂದ್ರಗಳಿAದ (ಬೂತ್‌ಗಳು) ಮಕ್ಕಳಿಗೆ ಲಸಿಕೆ ಹಾಕಲಾಗುವುದು. ಇದಕ್ಕಾಗಿ 3,364 ಲಸಿಕೆ ಹಾಕುವ ಸಿಬ್ಬಂದಿ ಹಾಗೂ 334 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. 132 ಟ್ರಾನ್ಸಿಟ್ ತಂಡಗಳು ಹಾಗೂ ದೂರದ ಪ್ರದೇಶಗಳಿಗಾಗಿ 31 ಸಂಚಾರಿ ತಂಡಗಳು ಕಾರ್ಯಾಚರಣೆ ನಡೆಸಲಿವೆ. ಅಂಗನವಾಡಿ ಹಾಗೂ ಶಾಲೆಗಳಲ್ಲಿ ಕೇಂದ್ರಗಳನ್ನು ತೆರೆಯಲು ಸಿದ್ಧತೆಮಾಡಿಕೊಳ್ಳಿ ಎಂದು ಸೂಚನೆ ನೀಡಿದರು.

ಅಂದು ನಡೆಯುವ ಕಾರ್ಯಕ್ರಮಕ್ಕೆ ನಿರಂತರವಾಗಿ ವಿದ್ಯುತ್ ಸರಬರಾಜು ಮಾಡಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಕಾರ್ಮಿಕ ಇಲಾಖೆಯ ಸಹಯೋಗದೊಂದಿಗೆ ವಲಸೆ ಹಾಗೂ ಕಟ್ಟಡ ಕಾರ್ಮಿಕರ ಮಕ್ಕಳನ್ನು ತಲುಪಲು ವಿಶೇಷ ಮೈಕ್ರೋ ಪ್ಲಾನ್ ಸಿದ್ಧಪಡಿಸಿಕೊಳ್ಳಿ. ಕೊಳಗೇರಿ, ವಲಸೆ ಕಾರ್ಮಿಕರ ಪ್ರದೇಶ ಹಾಗೂ ಇಟ್ಟಿಗೆ ಭಟ್ಟಿಗಳ ಮೇಲೆ ತೀವ್ರ ನಿಗಾ ಇರಿಸಿ, ಉನ್ನತ ಅಧಿಕಾರಿಗಳ ತಂಡವು ಖುದ್ದಾಗಿ ಹೈ ರಿಸ್ಕ್ ಪ್ರದೇಶಗಳಿಗೆ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನು ಪರಿಶೀಲಿಸಬೇಕು. ಪೋಷಕರು ತಮ್ಮ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ ರಾಷ್ಟ್ರೀಯ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಕೋರಿದರು.

 

ಕರಪತ್ರ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಹೆಚ್ಚು ಪ್ರಚಾರ ನೀಡಬೇಕು. ಪಲ್ಸ್ ಪೋಲಿಯೋ ಕಾರ್ಯಕ್ರಮದ ಯಶಸ್ವಿಗೆ ಶಿಕ್ಷಣ ಇಲಾಖೆ, ಸಾರಿಗೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಟ್ಟಡ ಕಾರ್ಮಿಕ ಇಲಾಖೆ, ಪೊಲೀಸ ಇಲಾಖೆ ಸೇರಿದಂತೆ ಬೇರೆ ಬೇರೆ ಇಲಾಖೆಗಳು ಒಗ್ಗೂಡಿ ಕಾರ್ಯನಿರ್ವಹಿಸಬೇಕೆಂದರು. ಸರ್ವೇಲೈಸ್ ಅಧಿಕಾರಿ ಅನಿಲ ತಾಳಿಕೋಟಿ ಅವರು ಪಿ.ಪಿ.ಟಿ. ಮೂಲಕ ಮಾಹಿತಿಯನ್ನು ನೀಡಿದರು.

 

ಇದೇ ಸಂದರ್ಭದಲ್ಲಿ ಪಲ್ಸ ಪೋಲಿಯೋ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿದರು.

 

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಸಂಕನೂರ್, ಮಹಾನಗರ ಪಾಲಿಕೆಯ ಆಯುಕ್ತರಾದ ಅವಿನಾಶ ಶಿಂಧೆ, ಡಿಹೆಚ್‌ಓ ಡಾ. ಶರಣಬಸಪ್ಪ ಕ್ಯಾತನಾಳ, ಜಿಲ್ಲಾ ಸರ್ಜನ್ ಡಾ.ರೂಕ್ಕಿಯ್ಯ ಅಸನಾ ರಬ್,ಆರ್.ಸಿ.ಹೆಚ್. ಅಧಿಕಾರಿ ಡಾ.ಸಿದ್ದು ಪಾಟೀಲ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಶಂಕ್ರಮ್ಮ ಡವಳಗಿ, ಮಹಿಳಾ ಮತ್ತು ಮಕ್ಕಳ ಉಪನಿರ್ದೇಶಕ ರಾಜಕುಮಾರ್ ರಾಠೋಡ, ತಾಲೂಕಿನ ತಹಶೀಲ್ದಾರು, ವೈದ್ಯಾಧಿಕಾರಿಗಳು, ಅಂಗನವಾಡಿ , ಆಶಾ ಕಾರ್ಯಕರ್ತರು ಉಪಸ್ಥಿತರಿದ್ದರು.

Share This Article
Leave a Comment