ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ಒತ್ತಾಯ

 

ಬೀದರ್, ಮೇ.೨೭- ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಅಕ್ರಮ ಮದ್ಯ ಮಾರಾಟ, ಮದ್ಯ ಉತ್ಪಾದನೆ ಹಾಗೂ ಕಳ್ಳಭಟ್ಟಿ ಸರಾಯಿ ತಯಾರಿಕೆ ಹೆಚ್ಚಾಗಿರುವ ಹಿನ್ನೆಲೆ ಸಂಬAಧಪಟ್ಟವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಇಂಡಿಯನ್ ನ್ಯಾಷನಲ್ ಭೀಮ ಆರ್ಮಿ ಸಂಘಟನೆ ಸಂಸ್ಥಾಪಕ ಅಧ್ಯಕ್ಷ ದಿಲೀಪಕುಮಾರ್ ವರ್ಮಾ ಅವರು ಒತ್ತಾಯಿಸಿದರು.

ಈ ಕುರಿತು ಅಬಕಾರಿ ಉಪ ಆಯುಕ್ತರಿಗೆ ಮನವಿ ಸಲ್ಲಿಸಿದ ಅವರು, ಜಿಲ್ಲೆಯ ಎಂಟು ತಾಲ್ಲೂಕುಗಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾನೂನುಬಾಹಿರವಾಗಿ ಮದ್ಯ ಮಾರಾಟ ನಡೆಯುತ್ತಿದ್ದು, ಇದರಿಂದ ಯುವಕರು, ರೈತರು, ಕೂಲಿ ಕಾರ್ಮಿಕರು ಹಾಗೂ ಹಿಂದುಳಿದ ವರ್ಗದ ಜನರು ಮದ್ಯ ವ್ಯಸನಕ್ಕೆ ಒಳಗಾಗಿ ತಮ್ಮ ಜೀವನ ಹಾಳು ಮಾಡಿಕೊಂಡಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಅಕ್ರಮ ಮದ್ಯ ಮಾರಾಟದಿಂದ ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದು, ಮಹಿಳೆಯರು ತಮ್ಮ ಗಂಡAದಿರು ಹಾಗೂ ಮಕ್ಕಳನ್ನು ಕಳೆದುಕೊಂಡು ಜೀವನ ನಡೆಸುವ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಕಲ್ಯಾಣ ಕರ್ನಾಟಕ ಭಾಗವು ಈಗಾಗಲೇ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶವಾಗಿದ್ದು, ಇಂತಹ ಅಕ್ರಮ ಚಟುವಟಿಕೆಗಳಿಂದ ಬಡವರ ಜೀವನ ಮತ್ತಷ್ಟು ದುಸ್ತರವಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ನಡೆಸುವವರ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಬೀದರ ಅಬಕಾರಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಅವರು ಎಚ್ಚರಿಸಿದರು. ಈ ಸಂದರ್ಭದಲ್ಲಿ ರಾಜಶೇಖರ್ ಶೇರಿಕರ್, ಶ್ರೀಕಾಂತ ಸಾಗರ್, ಪೀಟರ್ ಲಾಯನ್, ಭೀಮರಾವ್ ಖಂದಾರೆ ಹಾಗೂ ಪ್ರಭು ಎಸ್. ಭಾವಿಕಟ್ಟೆ ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.

Share This Article
Leave a Comment