ಪಂಚ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಎಡಗೈ ಸಾಧಕರಿಗೆ ಗೌರವ

 

ಕಲಬುರಗಿ: ನಗರದ ಹೊರವಲಯದ ಉಪಳಾಂವದಲ್ಲಿರುವ ಶ್ರೀರಾಮ್ ಕನ್ನಡ ಕಾನ್ವೆಂಟ್ ಶಾಲೆಯಲ್ಲಿ ದಿನಾಂಕ 24-05-2026 ರಂದು ಜೈ ಸಂತೋಷಿ ಮಾತಾ ಕಲಬುರಗಿ ಇವರ ಸಹಯೋಗದಲ್ಲಿ ಪಂಚ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮೂವರು ಎಡಗೈ ಸಾಧಕರಿಗೆ ವಿಶೇಷ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಾಹಿತಿ ಹಾಗೂ ಕುವೆಂಪು ವಿಶ್ವವಿದ್ಯಾಲಯದಲ್ಲಿ ಕರಣಿಕರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀ ಶಾಂತಮಲ್ಲಪ್ಪ ಕರಿಕಲ್ ಮತ್ತು ಶ್ರೀಮತಿ ರೇಣುಕಾ ಕರಿಕಲ್ ದಂಪತಿಗಳಿಗೆ “ಎಡಗೈ ಸಾಧಕರ ಪ್ರಶಸ್ತಿ” ನೀಡಿ ಗೌರವಿಸಲಾಯಿತು.

ಸಾಹಿತ್ಯ, ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಇವರ ಸೇವೆಯನ್ನು ಗುರುತಿಸಿ ಗಣ್ಯರು ಪ್ರಶಂಸಿಸಿದರು. ಕಾರ್ಯಕ್ರಮದಲ್ಲಿ ಅನೇಕ ಹಿರಿಯ ಸಾಹಿತಿಗಳು, ಕಣ್ಣಿ ಗ್ರಾಮದ ಸ್ನೇಹಿತ ಬಳಗದ ಸದಸ್ಯರು ಹಾಗೂ ಕುಟುಂಬ ವರ್ಗದವರು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು.

ಪಂಚ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮವು ಸಾಹಿತ್ಯಾಸಕ್ತರ ಗಮನ ಸೆಳೆಯುವ ಮೂಲಕ ಯಶಸ್ವಿಯಾಗಿ ನೆರವೇರಿತು.

Share This Article
Leave a Comment