ರಾಜ್ಯಪಾಲರಿಗಾಗಿ ರಸ್ತೆಬಂದ್: ಗರ್ಭಿಣಿ ಪತ್ನಿಗಾಗಿ ಬೀದಿಗಿಳಿದು ಪ್ರತಿಭಟಿಸಿದ ಪತಿ

 

ಬೆಂಗಳೂರು: ರಾಜ್ಯಪಾಲರ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲು ನಗರದ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿ ಭಾನುವಾರ 30 ನಿಮಿಷ ಸಾರ್ವಜನಿಕ ಓಡಾಟಕ್ಕೆ ನಿರ್ಬಂಧ ಹೇರಲಾಗಿತ್ತು. ಈ ವೇಳೆ ಆಕ್ರೋಶಗೊಂಡ ವ್ಯಕ್ತಿಯೊಬ್ಬರು, ‘ಗರ್ಭಿಣಿ ಪತ್ನಿ ವಾಹನದೊಳಗೆ ಸಿಲುಕಿಕೊಂಡಿದ್ದಾಳೆ, ಹೋಗಲು ದಾರಿಬಿಡಿ’ ಎಂದು ರಸ್ತೆಯಲ್ಲಿ ಕುಳಿತು ಧರಣಿ ನಡೆಸಿದ್ದಾರೆ.

 

ವ್ಯಕ್ತಿಯೊಬ್ಬರು ರಸ್ತೆಯಲ್ಲಿ ಕುಳಿತು, ಸಂಚಾರ ಪೊಲೀಸರೊಂದಿಗೆ ವಾಗ್ವಾದ ನಡೆಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ಪರ-ವಿರೋಧ ಚರ್ಚೆಗಳು ಆರಂಭವಾಗಿವೆ. ಈಗಾಗಲೇ ವಿಐಪಿ ಸಂಸ್ಕೃತಿಯಿಂದಾಗಿ ಬೆಂಗಳೂರಿನ ರಸ್ತೆಗಳು ಇಕ್ಕಟ್ಟಾಗಿವೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.

Share This Article
Leave a Comment