*ಡಾ. ಶರಣಪ್ರಕಾಶ ಪಾಟೀಲರಿಗೆ ಡಿಸಿಎಂ ಸ್ಥಾನ ನೀಡಿ, ಮಹಿಳಾ ಘಟಕದಿಂದ ಪೂಜೆ*

 

ಸೇಡಂ : ನಗರದ ಶ್ರೀ ಕೊತಗತಲ ಬಸವೇಶ್ವರ ದೇವಾಲಯದಲ್ಲಿ ಡಾ. ಶರಣಪ್ರಕಾಶ ಪಾಟೀಲ ಅವರಿಗೆ ಡಿಸಿಎಂ ಮಾಡುವಂತೆ ಕಾಂಗ್ರೆಸ್ ಮಹಿಳಾ ಘಟಕದಿಂದ ವಿಶೇಷ ಪೂಜೆ ಸಲ್ಲಿಸಲಾಯಿತು.

ರಾಜ್ಯದ ಹಿರಿಯ ನಾಯಕರು ಹಾಗೂ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ ಅವರಿಗೆ ಉಪ ಮುಖ್ಯಮಂತ್ರಿ (ಡಿಸಿಎಂ) ಸ್ಥಾನ ನೀಡುವಂತೆ ಆಗ್ರಹಿಸಿ, ಸೇಡಂ ತಾಲೂಕಿನ ಕೊತ್ತಲ ಬಸವೇಶ್ವರ ದೇವಾಲಯದಲ್ಲಿ ಮಹಿಳಾ ಘಟಕದ ವತಿಯಿಂದ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮಹಿಳಾ ಘಟಕದ ಮುಖಂಡರು, ಡಾ. ಶರಣಪ್ರಕಾಶ ಪಾಟೀಲ ಅವರು ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದು, ಸಚಿವರಾಗಿ ಸಮರ್ಥ ಆಡಳಿತ ಮತ್ತು ಜನಪರ ಕಾರ್ಯಗಳ ಮೂಲಕ ಜನರ ವಿಶ್ವಾಸ ಗಳಿಸಿದ್ದಾರೆ. ಅವರ ಅನುಭವ, ಪ್ರಾಮಾಣಿಕತೆ ಹಾಗೂ ಕಳಂಕರಹಿತ ರಾಜಕೀಯ ಜೀವನವನ್ನು ಪರಿಗಣಿಸಿ ರಾಜ್ಯ ಸರ್ಕಾರವು ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಡಾ. ಶರಣಪ್ರಕಾಶ ಪಾಟೀಲ ಅವರಿಗೆ ಉನ್ನತ ಸ್ಥಾನಮಾನ ದೊರೆಯಲಿ ಹಾಗೂ ರಾಜ್ಯದ ಅಭಿವೃದ್ಧಿಗೆ ಇನ್ನಷ್ಟು ಸೇವೆ ಸಲ್ಲಿಸುವ ಅವಕಾಶ ಸಿಗಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಹಿಳಾ ಘಟಕದ ಪದಾಧಿಕಾರಿಗಳು, ಕಾರ್ಯಕರ್ತೆಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ಸೇಡಂ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಲಿತ ಯಾಕಾಪೂರ, ಸದಸ್ಯರಾದ ಬಸಮ್ಮ ಪಾಟೀಲ, ಶೋಭಾ ವಾಲಿಕರ್, ನೀರಜಾ ಕುಲಕರ್ಣಿ, ಸಂಧ್ಯಾರಾಣಿ, ಸರೋಜಾ, ರೇಣುಕಾ, ಯಂಕಮ್ಮ, ಮಲ್ಲಮ್ಮ ಪತ್ರಿ, ಮಮತಾ ಮಾಠಪತಿ, ನೀಲಾಬಾಯಿ ರಾಥೋಡ್, ಲಕ್ಷ್ಮಿ ಲೋಕಪಲ್ಲಿ ಸೇರಿದಂತೆ ಇತರರಿದ್ದರು.

Share This Article
Leave a Comment