ಗೌತಮ ಬುದ್ಧರ ಪ್ರತಿಮೆ ನೀಡಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಸನ್ಮಾನ

 

 

ಬೆಂಗಳೂರು, ಜೂ. 9: ರಾಜ್ಯದ ಗೃಹ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರಾದ ಪ್ರಿಯಾಂಕ್ ಖರ್ಗೆ ಅವರನ್ನು ಬೆಂಗಳೂರಿನಲ್ಲಿ ಕೋಲಿ ಕಬ್ಬಲಿಗ ಎಸ್‌ಟಿ ಹೋರಾಟ ಸಮಿತಿ ಹಾಗೂ ಕಾಂಗ್ರೆಸ್ ಮುಖಂಡರು ಭೇಟಿ ಮಾಡಿ ಗೌತಮ ಬುದ್ಧರ ಪ್ರತಿಮೆ ನೀಡಿ ಸನ್ಮಾನಿಸಿ ಶುಭಾಶಯ ಕೋರಿದರು.

ಈ ವೇಳೆ ಸಮಿತಿಯ ಪ್ರಮುಖರಾದ ಲಚ್ಚಪ್ಪ ಜಮಾದಾರ ನೇತೃತ್ವದ ನಿಯೋಗ ಸಚಿವರನ್ನು ಭೇಟಿಯಾಗಿ ಸಮುದಾಯದ ವಿವಿಧ ಬೇಡಿಕೆಗಳು ಹಾಗೂ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚೆ ನಡೆಸಿತು. ಕೋಲಿ ಕಬ್ಬಲಿಗ ಸಮುದಾಯದ ಹಕ್ಕುಗಳು ಮತ್ತು ಕಲ್ಯಾಣಕ್ಕಾಗಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮುಖಂಡರು ಮನವಿ ಸಲ್ಲಿಸಿದರು.

ಸನ್ಮಾನ ಸ್ವೀಕರಿಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಮುದಾಯದ ಮುಖಂಡರ ಅಭಿನಂದನೆಗಳಿಗೆ ಕೃತಜ್ಞತೆ ಸಲ್ಲಿಸಿ, ಸಮುದಾಯದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು. ಸಮಾಜದ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅವರ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಗುಡುಬಾ, ಅಂಬರಾಯ ಜವಳಗಾ, ಸಿದ್ದಪ್ಪ ಸಿನೂರ, ರಾಮಲಿಂಗ ನಾಟಿಕಾರ, ಮರೆಪ್ಪ ಹಳ್ಳಿ, ನಾಗೇಂದ್ರಪ್ಪ ಲಿಂಗಪ್ಪಲ್ಲಿ, ಸಾಬಣ್ಣ ತೋಟನಳ್ಳಿ ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Share This Article
Leave a Comment