ಜೂನ್ 21 ರಂದು ವಿಶ್ವ ಯೋಗ ದಿನಾಚರಣೆ ಪೂರ್ವಭಾವಿ ಸಭೆ* *ಯೋಗವು ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಗೆ ಅತ್ಯಂತ ಪರಿಣಾಮಕಾರಿಯಾಗಿದೆ* ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ.

 

ಕಲಬುರಗಿ, ಜೂನ್ 15- ಯೋಗವು ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ದಿಗೆ ಅತ್ಯಂತ ಪರಿಣಾಮಕಾರಿ ಸಾಧನವಾಗಿದ್ದು, ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಹೇಳಿದರು.

 

ಇತ್ತೀಚೆಗೆ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಜೂನ್ 21 ರಂದು ಬೆಳಿಗ್ಗೆ 7 ಗಂಟೆಯಿAದ 7:45 ರವರೆಗೆ ನಗರದ ಡಾ. ಚಂದ್ರಶೇಖರ್ ಪಾಟೀಲ್ ಕ್ರೀಡಾಂಗಣದಲ್ಲಿ ಬೃಹತ್ ಯೋಗ ಪ್ರದರ್ಶನ ಕಾರ್ಯಕ್ರಮಕ್ಕೆ ಬರುವ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಾರ್ವಜನಿಕರು ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿಗಳು ಬೆಳಿಗ್ಗೆ 6:30ರ ಒಳಗಾಗಿ ಕ್ರೀಡಾಂಗಣ ತಲುಪಿ ನಿಯೋಜಿತ ಜಾಗಗಳಲ್ಲಿ ಸಿದ್ಧರಿರಬೇಕು ತಿಳಿಸಿದರು,

 

ಕ್ರೀಡಾಂಗಣದಲ್ಲಿ ಯೋಗಾಸನಕ್ಕೆ ಮ್ಯಾಟ್‌ಗಳ ಅಳವಡಿಕೆ, ಶುದ್ಧ ಕುಡಿಯುವ ನೀರಿನ ಸೌಲಭ್ಯ, ತುರ್ತು ಚಿಕಿತ್ಸೆಗಾಗಿ ಆಂಬುಲೆನ್ಸ್ ವ್ಯವಸ್ಥೆ ಹಾಗೂ ಸೂಕ್ತ ಪೊಲೀಸ್ ಭದ್ರತೆಯನ್ನು ಕಲ್ಪಿಸಬೇಕು. ಕ್ರೀಡಾಂಗಣದಲ್ಲಿ ಬೆಳೆದಿರುವ ಹುಲ್ಲನ್ನು ಸಣ್ಣದಾಗಿ ಕತ್ತರಿಸಿ ಇಡೀ ಆವರಣವನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಮಹಾನಗರ ಪಾಲಿಕೆ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ತೋಟಗಾರಿಕೆ ಇಲಾಖೆಯಿಂದ ಕ್ರೀಡಾಂಗಣದ ಸೌಂದರ್ಯೀಕರಣಕ್ಕಾಗಿ 50 ಅಲಂಕಾರಿಕ ಗಿಡಗಳ ಕುಂಡಗಳನ್ನು ಒದಗಿಸುವಂತೆ ತಿಳಿಸಿದರು.

ಗಿನ್ನೆಸ್ ವಿಶ್ವ ದಾಖಲೆಯ ಪ್ರಯತ್ನ:*

 

ಜೂನ್ 14 ರಂದು ಆನ್‌ಲೈನ್ ಮೂಲಕ ಯೋಗದ ಗಿನ್ನೆಸ್ ವಿಶ್ವ ದಾಖಲೆಯ ಮಹತ್ತರ ಪ್ರಯತ್ನವೊಂದು ನಡೆಯುತ್ತಿದ್ದು, ಜಿಲ್ಲೆಯಿಂದ ಗರಿಷ್ಠ ಸಂಖ್ಯೆಯ ನೋಂದಣಿ ದಾಖಲಾಗಬೇಕಿದೆ. ಇದಕ್ಕಾಗಿ ವೆಬ್ ಪೋರ್ಟಲ್ ಲಿಂಕ್ ಅನ್ನು ಎಲ್ಲಾ ಇಲಾಖೆಗಳ ಗ್ರೂಪ್‌ಗಳಲ್ಲಿ ಹಂಚಿಕೊಳ್ಳಬೇಕು. ವಿಶೇಷವಾಗಿ ಶಿಕ್ಷಣ ಇಲಾಖೆ (ಶಾಲೆಗಳು), ಸಮಾಜ ಕಲ್ಯಾಣ ಇಲಾಖೆ (ವಸತಿ ನಿಲಯಗಳು) ಮತ್ತು ಪೊಲೀಸ್ ಇಲಾಖೆಯ ಸಿಬ್ಬಂದಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಹಾಗೂ ಯೋಗ ಮಾಡುವಾಗ ತೆಗೆದ ಫೋಟೋಗಳನ್ನು ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಬೇಕು ಎಂದು ಕಟ್ಟುನಿಟ್ಟಾಗಿ ಆದೇಶಿಸಿದರು.

 

*ಜೂನ್ 19 ರಂದು ಬೃಹತ್ ‘ಯೋಗ ನಡಿಗೆ’:*

 

ಮುಖ್ಯ ಕಾರ್ಯಕ್ರಮದ ಮುನ್ನೋಡಿಯಾಗಿ ಜೂನ್ 19 ರಂದು ಬೆಳಿಗ್ಗೆ 9:30 ಕ್ಕೆ ನಗರದಲ್ಲಿ ‘ಯೋಗ ನಡಿಗೆ’ (ರನ್ ಫಾರ್ ಯೋಗ) ಆಯೋಜಿಸಲಾಗಿದೆ. ಈ ನಡಿಗೆಯು ಜಗತ್ ವೃತ್ತದಿಂದ ಆರಂಭವಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಸಾಗಲಿದೆ. ಜಿಲ್ಲೆಯ ಜನಸಾಮಾನ್ಯರು, ಯೋಗಾಸಕ್ತರು ಮತ್ತು ಸಂಘಸಂಸ್ಥೆಗಳು ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಕೋರಲಾಗಿದೆ.

 

ಇದೇ ಸಂದರ್ಭದಲ್ಲಿ ಪ್ರೊಬೇಷನರಿ ಐ.ಎ.ಎಸ್. ಶಿಖರ್ ಮೋಘ, ಡಿಯುಡಿಸಿ ಜಿಲ್ಲಾ ಯೋಜನಾ ನಿರ್ದೇಶಕ ಮುನ್ನವರ ದೌಲಾ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶ ರಾಜಕುಮಾರ ರಾಠೋಡ, ಯುವ ಜನಸೇವಾ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸಂಗಮೇಶ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಶಂಕ್ರಮ್ಮ ಡವಳಗಿ, ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಡಾ. ಕೆ.ಬಿ. ಬಬಲಾದಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಸೇರಿದಂತೆ ಮಹಾನಗರ ಪಾಲಿಕೆಯ ಅಧಿಕಾರಿಗಳು ಪೋಲಿಸ್ ಇಲಾಖೆಯ ಅಧಿಕಾರಿಗಳು ಬಸವೇಶ್ವರ ಆಯುವೇಧಿಕ ಮೇಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ ಪ್ರಾಂಶುಪಾಲರು ವಿವಿಧ ಇಲಾಖೆ ಯ ಪ್ರಾಂಶುಪಾಲರು, ಪತಂಜಲಿ ಯೋಜನಾ ಸಮಿತಿ ಅಧ್ಯಕ್ಷರು ಹಾಗೂ ಇತರರು ಭಾಗವಹಿಸಿದ್ದರು.

Share This Article
Leave a Comment