*ಗುತ್ತಿಗೆ ಆಧಾರಿತ ನೇಮಕಗೊಂಡ ವೈದ್ಯರಿಗೆ ನೇಮಕಾತಿ ಪತ್ರ ವಿತರಣೆ*

 

ಗುತ್ತಿಗೆ ಆಧಾರಿತ ನೇಮಕಗೊಂಡ ವೈದ್ಯರಿಗೆ ನೇಮಕಾತಿ ಪತ್ರ ವಿತರಣೆ*

ಕಲಬುರಗಿ,ಜೂ.24- ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀನದ

ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ ಗುತ್ತಿಗೆ ಅಧಾರದ ಮೇಲೆ ನೇಮಕಗೊಂಡ 13 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು ಮತ್ತು 5 ತುರ್ತು ಚಿಕಿತ್ಸಾ ಮತ್ತು ಹಿರಿಯ ವೈದ್ಯಾಧಿಕಾರಿಗಳಿಗೆ ಬುಧವಾರ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ನೇಮಕಾತಿ ಪತ್ರ ವಿತರಿಸಿದರು.

 

ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿನ 16 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ವಾಕ್-ಇನ್-ಇಂಟರವ್ಯೂವ್ ಮೂಲಕ ಹಾಜರಾದ 13 ಅಭ್ಯರ್ಥಿಗಳಿಗೆ ಮತ್ತು ಸ.ಸಾ.ಆಸ್ಪತ್ರೆ ಹಾಗೂ ಸ.ಆ.ಕೇಂದ್ರಗಳಲ್ಲಿ ಖಾಲಿ ಇರುವ 6ತುರ್ತು ಚಿಕಿತ್ಸಾ ಮತ್ತು ಹಿರಿಯ ವೈದ್ಯಾಧಿಕಾರಿಗಳ ಹುದ್ದೆಗಳಲ್ಲಿ 5 ಜನ ಅಭ್ಯರ್ಥಿಗಳು ಆಯ್ಕೆಗೊಂಡಿದ್ದು, ಇಂದಿಲ್ಲಿ ನೇಮಕಾತಿ ಆದೇಶ ನೀಡಲಾಯಿತು‌.

 

ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶರಣಬಸಪ್ಪ ಕ್ಯಾತನಾಳ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಸಿದ್ದು ಪಾಟೀಲ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

ಇನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 2 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು ಮತ್ತು ಸರ್ಕಾರಿ ಸಾರ್ವಜನಿಕ ಆಸ್ಪತ್ರೆ/ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ 2 ವೈದ್ಯಾಧಿಕಾರಿಗಳ ಹುದ್ದೆ ಖಾಲಿ ಇದ್ದು, ಇಚ್ಛೆಯುಳ್ಳ ಅಭ್ಯರ್ಥಿಗಳು ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿಗೆ ಸಲ್ಲಿಸಬಹುದಾಗಿದೆ.

Share This Article
Leave a Comment