ಬೀದರ್, ಜೂ.೨೫- ಒಳ ಮೀಸಲಾತಿಯ ಅವೈಜ್ಞಾನಿಕ ಹಂಚಿಕೆಯ ಮೂಲಕ ಬಂಜಾರಾ ಸಮಾಜಕ್ಕೆ ಅನ್ಯಾಯ ಎಸಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೂನ್ ೨೯ರಂದು ಬೆಳಿಗ್ಗೆ ೧೧.೩೦ ಗಂಟೆಗೆ ನಗರದ ಝೀರಾ ಫಂಕ್ಷನ್ ಹಾಲ್‌ನಲ್ಲಿ ಬಂಜಾರಾ ಸಮಾಜದಿಂದ ಬೃಹತ್ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಹಾಗೂ ಔರಾದ(ಬಿ) ಶಾಸಕ ಪ್ರಭು ಬಿ. ಚವ್ಹಾಣ್ ಅವರು ತಿಳಿಸಿದ್ದಾರೆ.
ಅಂದು ಬೆಳಿಗ್ಗೆ ಜಿಲ್ಲಾ ಬಂಜಾರಾ ಭವನದ ಹತ್ತಿರದ ಶ್ರೀ ಮಾತಾ ಜಗದಂಬಾ ಹಾಗೂ ಸಂತ ಸೇವಾಲಾಲ ಮಹಾರಾಜರ ಮಂದಿರದಿAದ ಝೀರಾ ಪಂಕ್ಷನ್ ಹಾಲ್‌ವರೆಗೆ ಪಾದಯಾತ್ರೆ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಜನಜಾಗೃತಿ ಸಮಾವೇಶ ಆರಂಭಿಸಲಾಗುತ್ತದೆ. ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್, ಮಾಜಿ ಶಾಸಕ ಪಿ. ರಾಜೀವ್, ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ, ಡಾ. ಚಂದ್ರು ಲಮಾಣಿ, ಕೃಷ್ಣಾ ನಾಯಕ್, ಶರಣು ಸಲಗರ್, ಡಾ. ಸಿದ್ದಲಿಂಗಪ್ಪ ಪಾಟೀಲ್, ಡಾ. ಅವಿನಾಶ್ ಜಾಧವ್, ಮಾಜಿ ಸಂಸದ ಉಮೇಶ್ ಜಾಧವ್, ವಿಧಾನ ಪರಿಷತ್‌ನ ಮಾಜಿ ಸಭಾಪತಿ ರಘುನಾಥರಾವ್ ಮಲ್ಕಾಪೂರೆ, ಸುಭಾಷ್ ಕಲ್ಲೂರ್, ಪ್ರಕಾಶ್ ಖಂಡ್ರೆ, ಮುಖಂಡರಾದ ಈರ್ಶವರಸಿಂಗ್ ಠಾಕೂರ್, ಬಂಜಾರಾ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ್ ಪವಾರ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಸಮಾಜದ ಗಣ್ಯರು ಆಗಮಿಸುವರು ಎಂದು ಅವರು ಹೇಳಿಕೆಯಲ್ಲಿ ವಿವರಿಸಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿAದ ಸಮಾಜದ ವಿವಿಧ ಜಾತಿ-ಜನಾಂಗಗಳ ನಡುವೆ ಭಿನ್ನಾಭಿಪ್ರಾಯ ಮತ್ತು ಸಂಘರ್ಷ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಒಳ ಮೀಸಲಾತಿಯ ಹೆಸರಿನಲ್ಲಿ ಬಂಜಾರಾ ಸಮಾಜಕ್ಕೆ ತೀವ್ರ ಅನ್ಯಾಯವಾಗಿದ್ದು, ಸಮಾಜದ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ ನಡೆದಿದೆ ರಾಜ್ಯ ಸರ್ಕಾರವು ಒಳ ಮೀಸಲಾತಿ ಹಂಚಿಕೆಯಲ್ಲಿ ವೈಜ್ಞಾನಿಕ ಹಾಗೂ ನ್ಯಾಯಸಮ್ಮತ ಮಾನದಂಡಗಳನ್ನು ಅನುಸರಿಸದೇ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿರುವುದರಿAದ ಬಂಜಾರಾ ಸಮುದಾಯಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಶಿಕ್ಷಣ ಮತ್ತು ಉದ್ಯೋಗಳಲ್ಲಿ ಅನ್ಯಾಯವಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ನಾನು ಒಳ ಮೀಸಲಾತಿಯ ವರ್ಗೀಕರಣವನ್ನು ವಿರೋಧಿಸುತ್ತಲೇ ಬಂದಿದ್ದೇನೆ. ಹಿಂದೆ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವರಿಕೆ ಮಾಡಿಕೊಟ್ಟಿದ್ದೆ. ಸಂಬAಧಪಟ್ಟ ಎಲ್ಲರಿಗೂ ತಿಳಿಸಿದ್ದೇನೆ. ಇದ್ಯಾವುದನ್ನೂ ಕಿವಿಗೆ ಹಾಕಿಕೊಂಡಿಲ್ಲ. ಬಂಜಾರಾ ಸಮಾಜವಲ್ಲದೇ ಭೋವಿ, ಕೊರಮ, ಕೊರಚ ಸಮಾಜಗಳಿಗೂ ಅನ್ಯಾಯ ಮಾಡಲಾಗಿದೆ. ಇದರಿಂದ ಸಮಾಜದಲ್ಲಿ ವ್ಯಾಪಕ ಅಸಮಾಧಾನ ಉಂಟಾಗಿದ್ದು, ಸರ್ಕಾರದ ವಿರುದ್ಧ ಹೋರಾಟ ನಡೆಸುವುದು ಅನಿವಾರ್ಯವಾಗಿದೆ. ಕಾರಣ ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಕೋರಿದ್ದಾರೆ.